alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿ ಮಾನಭಂಗಕ್ಕೆ ಯತ್ನ

ಮಂಗಳೂರು: ಚಾಕೊಲೇಟ್ ಕೊಡುವುದಾಗಿ ಹೇಳಿ ಮಾನಭಂಗಕ್ಕೆ ಯತ್ನಿಸಿದ್ದ ಇಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಂದರ್ ಹಾಗೂ ಶಾಬಿತ್ ಬಂಧಿತ ಆರೋಪಿಗಳು. ಅಪ್ರಾಪ್ತ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಇವರಿಬ್ಬರು ಬಲವಂತ ಮಾಡುತ್ತಿದ್ದರೆನ್ನಲಾಗಿದೆ.

ವಿದ್ಯಾರ್ಥಿನಿಗೆ ಆಗಾಗ ಅಡ್ಡಗಟ್ಟಿ ಚಾಕೊಲೇಟ್ ಇತರೆ ವಸ್ತುಗಳನ್ನು ಕೊಡಲು ಮುಂದಾಗಿದ್ದಾರೆ. ಪ್ರೀತಿಸುವಂತೆ ದುಂಬಾಲು ಬಿದ್ದಿದ್ದಲ್ಲದೇ, ಮನೆಯ ಬಳಿ ಬಂದು ಕಾಟ ಕೊಟ್ಟಿದ್ದಾರೆ.

ನಿನ್ನೆ ಶಾಪಿಂಗ್ ಕಾಂಪ್ಲೆಕ್ಸ್ ಒಂದರ ಬಳಿ ಚಾಕೊಲೆಟ್ ಕೊಡಲು ಮುಂದಾಗಿದ್ದು, ವಿದ್ಯಾರ್ಥಿನಿ ಪಡೆಯಲು ನಿರಾಕರಿಸಿದಾಗ ಮಾನಭಂಗಕ್ಕೆ ಯತ್ನಿಸಿದ್ದಾರೆ.

ಇದರಿಂದ ನೊಂದ ವಿದ್ಯಾರ್ಥಿನಿ ಪೋಷಕರಿಗೆ ವಿಷಯ ತಿಳಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...