alex Certify
ಕನ್ನಡ ದುನಿಯಾ       Mobile App
       

Kannada Duniya

ಹೈದರಾಬಾದ್ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕರ ಸಭೆ

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಶಾಸಕರ ಕುದುರೆ ವ್ಯಾಪಾರ ತಪ್ಪಿಸುವ ಸಲುವಾಗಿ ಹೈದರಾಬಾದ್ ಗೆ ತೆರಳಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಶನಿವಾರ ಸಂಜೆ 4 ಗಂಟೆಗೆ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನಲೆಯಲ್ಲಿ ಹೈದರಾಬಾದ್ ನಿಂದ ಬೆಂಗಳೂರಿಗೆ ಮರಳಿ ಬರಲಿದ್ದಾರೆ.

ಈ ಮಧ್ಯೆ ದಿಢೀರ್ ಆದ ಬೆಳವಣಿಗೆ ಹಿನ್ನಲೆಯಲ್ಲಿ ವಿಶೇಷ ವಿಮಾನದಲ್ಲಿ ಹೈದರಾಬಾದ್ ಗೆ ತೆರಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಜೊತೆಗೂಡಿ ನಾಳಿನ ವಿಶ್ವಾಸಮತ ಸಾಬೀತುಪಡಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಸಭೆ ನಡೆಸಿದ್ದಾರೆ.

ಯಾವುದೇ ಕಾರಣಕ್ಕೂ ಬಿಜೆಪಿ ಆಮಿಷಕ್ಕೆ ಒಳಗಾಗಬೇಡಿ ಎಂದು ಮನವಿ ಮಾಡಿಕೊಂಡಿರುವ ಸಿದ್ದರಾಮಯ್ಯನವರು, ಕಾಂಗ್ರೆಸ್ ತೆಗೆದುಕೊಂಡಿರುವ ನಿರ್ಧಾರದಂತೆ ವಿಶ್ವಾಸ ನಿರ್ಣಯದ ವಿರುದ್ದ ಮತ ಚಲಾಯಿಸುವಂತೆ ಹೇಳಿದ್ದಾರೆ. ಶಾಸಕರು ಬಸ್ ನಲ್ಲಿ ಹೈದರಾಬಾದ್ ನಿಂದ ಮರಳಲಿದ್ದಾರೆ ಎನ್ನಲಾಗುತ್ತಿದ್ದು, ಗಡಿ ಭಾಗದವರೆಗೆ ತೆಲಂಗಾಣ ಸರ್ಕಾರ ಇವರುಗಳಿಗೆ ರಕ್ಷಣೆ ನೀಡುತ್ತಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...