alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

loka

ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಣಕ್ಕೆ ಎಷ್ಟೆಲ್ಲಾ ಕಠಿಣ ಕ್ರಮ ಕೈಗೊಂಡರೂ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಲೋಕಾಯುಕ್ತ ಪೊಲೀಸರು ಭ್ರಷ್ಟರಿಗೆ ಬಲೆ ಬೀಸಿ ಅಕ್ರಮಗಳನ್ನು ಬಯಲಿಗೆಳೆಯುವ ಪ್ರಕ್ರಿಯೆ ರಾಜ್ಯದಲ್ಲಿ ಮುಂದುವರೆದಿದೆ.

ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಯೊಬ್ಬರಿಗೆ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಆಹಾರ ಇಲಾಖೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ವೆಂಕಣ್ಣ ಅವರ ಮನೆ ಮೇಲೆ ದಾಳಿ ಮಾಡಲಾಗಿದೆ. ರಾಯಚೂರಿನ ಯರಮರಸ್ ನಲ್ಲಿರುವ ವೆಂಕಣ್ಣ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಅಲ್ಲದೇ, ಯಾದಗಿರಿಯಲ್ಲಿರುವ ವೆಂಕಣ್ಣ ಅವರ ಕಚೇರಿಯ ಮೇಲೂ ದಾಳಿ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಹೇಳಲಾಗಿದೆ.

ಲೋಕಾಯುಕ್ತ ಪೊಲೀಸರಿಗೆ ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದಿಸಿರುವ ವೆಂಕಣ್ಣ ಅವರ ಬಗ್ಗೆ ದೂರು ಬಂದಿದ್ದು, ಇದರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಳಿಕ ಮಾಹಿತಿ ಕಲೆಹಾಕಿ ದಾಳಿ ಮಾಡಿದ್ದು, ದಾಳಿಯ ಸಂದರ್ಭದಲ್ಲಿ ಅಕ್ರಮದ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...