alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರವ ಡಾಕ್ಟರೇಟ್ ನಿರಾಕರಿಸಿದ ದ್ರಾವಿಡ್

rahul-dd

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್, ಗೌರವ ಡಾಕ್ಟರೇಟ್ ಪಡೆಯಲು ನಿರಾಕರಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಲು ದ್ರಾವಿಡ್ ಅವರನ್ನು ಆಯ್ಕೆ ಮಾಡಿದ್ದು, ರಾಜ್ಯಪಾಲರು ಅನುಮೋದನೆ ನೀಡಿದ್ದರು.

ಜನವರಿ 27 ರಂದು ಜ್ಯಾನಜ್ಯೋತಿ ಸಭಾಂಗಣದಲ್ಲಿ ನಡೆಯುವ ಬೆಂಗಳೂರು ವಿಶ್ವವಿದ್ಯಾಲಯದ 52 ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಹುಲ್ ದ್ರಾವಿಡ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಬೇಕಿತ್ತು.

ಆದರೆ, ಗೌರವ ಡಾಕ್ಟರೇಟ್ ಪದವಿ ಪಡೆಯಲು ಅವರು ನಿರಾಕರಿಸಿದ್ದಾರೆ. ಸಂಶೋಧನೆ ಮಾಡಿ ಪಿ.ಹೆಚ್.ಡಿ. ಪಡೆಯುವ ಉದ್ದೇಶದಿಂದ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸದಿರಲು ತೀರ್ಮಾನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...