alex Certify
ಕನ್ನಡ ದುನಿಯಾ       Mobile App
       

Kannada Duniya

2 ನೇ ದಿನವೂ ಬಿರುಸಿನ ಪ್ರಚಾರ ನಡೆಸಿದ ರಾಹುಲ್ ಗಾಂಧಿ

ಬಾಗಲಕೋಟೆ: ರಾಜ್ಯದಲ್ಲಿ 2 ನೇ ಹಂತದ ಜನಾಶೀರ್ವಾದ ಯಾತ್ರೆ ಪ್ರವಾಸ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಇಂದು ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಸವಣ್ಣನವರ ವಚನಗಳನ್ನು ಪ್ರಸ್ತಾಪಿಸಿ, ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ.ಜೆ.ಪಿ. ವಿರುದ್ಧ ಎಂದಿನಂತೆ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ನೋಟ್ ಬ್ಯಾನ್ ಮಾಡುವ ಮೂಲಕ ಕಪ್ಪು ಹಣವನ್ನು ವೈಟ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ನೋಟ್ ಬ್ಯಾನ್ ಆದ ಸಂದರ್ಭದಲ್ಲಿ ಬ್ಯಾಂಕಿನ ಎದುರು ಬಡವರು, ಮಧ್ಯಮವರ್ಗದವರು ನಿಲ್ಲುವಂತಾಗಿತ್ತು. ಒಬ್ಬ ಶ್ರೀಮಂತ ವ್ಯಕ್ತಿ ಕೂಡ ಬ್ಯಾಂಕಿನ ಎದುರು ಕಾಣಿಸಲಿಲ್ಲ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉದ್ಯೋಗ ಸೃಷ್ಠಿಗೆ ಒತ್ತು ನೀಡಿದೆ. ಉಚಿತವಾಗಿ ಅಕ್ಕಿ ನೀಡುತ್ತಿದೆ. ಆರೋಗ್ಯ ಭಾಗ್ಯ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ರಾಜ್ಯದ ಜನರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...