alex Certify
ಕನ್ನಡ ದುನಿಯಾ       Mobile App
       

Kannada Duniya

ರಾಯಚೂರು ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್

rg-rg

ರಾಯಚೂರು: ರಾಯಚೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

ನಗರದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.

ಸಮಾವೇಶ ನಡೆಯುವ ಸ್ಥಳದಲ್ಲಿ ರಾಷ್ಟ್ರೀಯ ಭದ್ರತಾ ಪಡೆ, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸಿ.ಸಿ. ಕ್ಯಾಮೆರಾ ಅಳವಡಿಸಲಾಗಿದ್ದು, ಜಿಲ್ಲಾ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿಯ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ರಾಯಚೂರಿಗೆ ತೆರಳಲಿದ್ದಾರೆ.

ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವು ಸಚಿವರು, ನಾಯಕರು ಪಾಲ್ಗೊಳ್ಳಲಿದ್ದಾರೆ. ರಾಹುಲ್ ಆಗಮನದ ಹಿನ್ನಲೆಯಲ್ಲಿ ರಾಯಚೂರಿನಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...