alex Certify
ಕನ್ನಡ ದುನಿಯಾ       Mobile App
       

Kannada Duniya

ಏಪ್ರಿಲ್ 26, 27 ರಂದು ಕರಾವಳಿಯಲ್ಲಿ ರಾಹುಲ್ ಪ್ರಚಾರ

ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಮತ್ತೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ 26, 27 ರಂದು ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದ ರಾಹುಲ್, ನಾಮಪತ್ರ ಸಲ್ಲಿಕೆ ಮುಗಿದ ಬಳಿಕ ಮತ್ತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಏಪ್ರಿಲ್ 26 ರಂದು ಗೋವಾದಿಂದ ಅಂಕೋಲಾಕ್ಕೆ ಆಗಮಿಸಿ ರೋಡ್ ಶೋ ನಡೆಸಲಿದ್ದಾರೆ. ಕುಮಟಾ, ಹೊನ್ನಾವರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಭಟ್ಕಳದಲ್ಲಿ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಲಿದ್ದು, ಮುರುಡೇಶ್ವರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 27 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...