alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಪ್ರಚಾರದಲ್ಲಿ ಹೊಸ ದಾಖಲೆ ಬರೆದ ರಾಹುಲ್ ಗಾಂಧಿ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕರ್ನಾಟಕದಲ್ಲಿ ಇದುವರೆಗೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಯಾವ ಅಧ್ಯಕ್ಷರೂ ಕೂಡ ಇಷ್ಟು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರಲಿಲ್ಲ.

ರಾಹುಲ್ ಗಾಂಧಿ ಅವರು ಸುಮಾರು 3500 ಕಿಲೋಮೀಟರ್ ಗೂ ಅಧಿಕ ದೂರವನ್ನು ಕ್ರಮಿಸಿದ್ದು, ರಾಜ್ಯದ ಎಲ್ಲಾ 30 ಜಿಲ್ಲೆಗಳಿಗೂ ಭೇಟಿ ನೀಡಿದ್ದಾರೆ. ಇದು ಕಾಂಗ್ರೆಸ್ ಅಧ್ಯಕ್ಷರ ಹೊಸ ದಾಖಲೆಯಾಗಿದೆ.

ಚುನಾವಣೆ ಪ್ರಚಾರದ ವೇಳೆಯಲ್ಲಿ ರಾಜ್ಯದ 30 ಜಿಲ್ಲೆಗಳಿಗೆ ಭೇಟಿ ನೀಡಿದ ಮೊದಲ ಕಾಂಗ್ರೆಸ್ ಅಧ್ಯಕ್ಷ ಎಂಬ ದಾಖಲೆ ರಾಹುಲ್ ಗಾಂಧಿ ಅವರದ್ದಾಗಿದೆ.

ಮೊದಲಿಗೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಅವರ ಪ್ರಚಾರ ಯಾತ್ರೆ ಆರಂಭವಾಯಿತು. ಚುನಾವಣೆ ಘೋಷಣೆಗೂ ಮೊದಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದ್ದ ರಾಹುಲ್ ಗಾಂಧಿ ಮುಂಬೈ ಕರ್ನಾಟಕ, ಕರಾವಳಿ ಕರ್ನಾಟಕ, ಮಲೆನಾಡು, ಬಯಲು ಸೀಮೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ಪ್ರಚಾರವನ್ನು ನಡೆಸಿದ್ದಾರೆ. ಇದೇ ವೇಳೆ ಮಠ, ಮಂದಿರ, ದೇವಾಲಯಗಳಿಗೂ ಭೇಟಿ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ ರಾಹುಲ್ ಗಾಂಧಿ ಅವರು ಇದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗುವುದರೊಂದಿಗೆ ಅವರ ಹೊಸ ದಾಖಲೆ ಸೃಷ್ಠಿಯಾಗಿದೆ. ರಾಹುಲ್ ಗಾಂಧಿ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರಚಾರ ನಡೆಸಿದಂತಾಗಿದೆ.

ಪ್ರವಾಸದ ಸಂದರ್ಭದಲ್ಲಿ ವಿಶೇಷ ಬಸ್ ಬಳಸುತ್ತಿದ್ದ ಅವರು, ಒಮ್ಮೊಮ್ಮೆ ಹೆಲಿಕಾಪ್ಟರ್ ನಲ್ಲಿ ಪ್ರವಾಸ ಕೈಗೊಂಡಿದ್ದರು. ಪಕ್ಷದ ನಾಯಕರು, ಮುಖಂಡರು ಕಾರ್ಯಕರ್ತರನ್ನು ಭೇಟಿ ಮಾಡಿ ಸಭೆ, ಸಮಾಲೋಚನೆ ನಡೆಸಿದರು. ಟೀ ಅಂಗಡಿ ಹೋಟೆಲ್ ಗಳಿಗೂ ಭೇಟಿ ನೀಡಿದ್ದಲ್ಲದೇ, ಪ್ರವಾಸದ ಸಂದರ್ಭದಲ್ಲಿ ಸಾಧ್ಯವಾದಷ್ಟು ಜನರಿಗೆ ಹತ್ತಿರವಾಗಿದ್ದರು.

ಇದರೊಂದಿಗೆ ರಾಹುಲ್ ಭಾಷಣವನ್ನು ಕನ್ನಡಕ್ಕೆ ಅನುವಾದಿಸಿದ್ದರಿಂದ ಹೆಚ್ಚಿನ ಜನರನ್ನು ತಲುಪಲು ಸಾಧ್ಯವಾಗಿದೆ. ಭಾಷಣವನ್ನು ನೇರ ಪ್ರಸಾರ ಮಾಡುವುದರ ಮೂಲಕ ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ನೀಡುವ ಮೂಲಕ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆ. ಇದು ಕಾಂಗ್ರೆಸ್ ಅಧ್ಯಕ್ಷರೊಬ್ಬರು ಮಾಡಿದ ಹೊಸ ದಾಖಲೆಯಾಗಿದೆ ಎನ್ನುವುದು ಪಕ್ಷದ ನಾಯಕರ ಅಭಿಪ್ರಾಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...