alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿನಿಂದ ಮತ್ತೆ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಪ್ರಚಾರವನ್ನು ಭರ್ಜರಿಯಾಗಿಯೇ ನಡೆಸಿದ್ದ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಇಂದಿನಿಂದ 2 ನೇ ಹಂತದ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದಾರೆ.

ಇಂದು ಮಧ್ಯಾಹ್ನ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದು, ಕಾರ್ಯಕ್ರಮದ ಹಿನ್ನಲೆಯಲ್ಲಿ ಸಿದ್ಧತೆ ನಡೆಸಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ವಿಜಯಪುರ ಜಿಲ್ಲೆಯ ತಿಕೋಟದಲ್ಲಿ ಸ್ತ್ರೀಶಕ್ತಿ ಸಮಾವೇಶ, ಚಿಕ್ಕೋಡಿಯಲ್ಲಿ ಪಕ್ಷದ ಪ್ರಮುಖರೊಂದಿಗೆ ಸಭೆ, ಹಾಗೂ ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.

ಫೆಬ್ರವರಿ 25 ರಂದು ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ನೀರು ತುಂಬಿದ ಬ್ಯಾರೇಜ್ ಬಳಿ ಸಂಭ್ರಮಾಚರಣೆ ನಡೆಸಲಿದ್ದಾರೆ. ವಿಜಯಪುರ ಜಿಲ್ಲೆ ಮುಳವಾಡ, ಬಾಗಲಕೋಟೆ ಜಿಲ್ಲೆ ಬೀಳಗಿ, ಮುಧೋಳದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಫೆಬ್ರವರಿ 26 ರಂದು ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಧಾರವಾಡ, ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...