alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿರಾ ಕ್ಯಾಂಟೀನ್ ಗೆ ರಾಹುಲ್ ಗಾಂಧಿ ಚಾಲನೆ

indira-canteen

ಸಿಎಂ ಸಿದ್ದರಾಮಯ್ಯ ಕನಸಿನ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ್ದಾರೆ. ಜಯನಗರದ ಕನಕನಪಾಳ್ಯದಲ್ಲಿ ಉದ್ಘಾಟನೆ ಸಮಾರಂಭ ನಡೆಯುತ್ತಿದೆ.

ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ನಂತ್ರ ರಾಹುಲ್ ಗಾಂಧಿ ಕ್ಯಾಂಟೀನ್ ವೀಕ್ಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ರಾಹುಲ್ ಗಾಂಧಿಗೆ ಸಾಥ್ ನೀಡಿದ್ದರು. ಅಡುಗೆ ತಯಾರಿ ಬಗ್ಗೆ ಹಾಗೂ ಕ್ಯಾಂಟೀನ್ ಕಾರ್ಯ ನಿರ್ವಹಣೆ ಬಗ್ಗೆ ರಾಹುಲ್ ಗಾಂಧಿ ಸಿಎಂರಿಂದ ಮಾಹಿತಿ ಪಡೆದಿದ್ದಾರೆ.

ಇದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಕೇವಲ 60 ದಿನಗಳಲ್ಲಿ ಕ್ಯಾಂಟೀನ್ ಉದ್ಘಾಟನೆಯಾಗ್ತಿದೆ ಎಂದು ಸರ್ಕಾರ ಹೇಳಿದೆ. 198 ವಾರ್ಡ್ ಗಳಲ್ಲಿ ಬಡವರಿಗಾಗಿ ಈ ಕ್ಯಾಂಟೀನ್ ಉದ್ಘಾಟನೆ ಮಾಡುವ ಯೋಜನೆ ಸರ್ಕಾರದ್ದು. ಇಂದು 101 ಕ್ಯಾಂಟೀನ್ ಲೋಕಾರ್ಪಣೆಯಾಗಿದೆ. 10 ರೂಪಾಯಿಗೆ ಊಟ ಹಾಗೂ 5 ರೂಪಾಯಿಗೆ ತಿಂಡಿ ಸಿಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...