alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಚಲನ ಮೂಡಿಸಿದ ರಾಹುಲ್ ಗಾಂಧಿ ರಾಜ್ಯ ಪ್ರವಾಸ

ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, 4 ನೇ ದಿನದ ಪ್ರವಾಸದಲ್ಲಿ ಕಲಬುರಗಿಯಲ್ಲಿ ಹೆಚ್.ಕೆ. ಆಡಿಟೊರಿಯಂನಲ್ಲಿ ವಾಣಿಜ್ಯೋದ್ಯಮಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ಸಂವಾದದಲ್ಲಿ ಅವರು ಮಾತನಾಡಿ, ನೋಟ್ ಬ್ಯಾನ್ ಮಾಡಿದ್ದು, ಆರ್.ಬಿ.ಐ. ನಿರ್ಧಾರವಲ್ಲ, ಬದಲಾಗಿ ಅದು ಆರ್.ಎಸ್.ಎಸ್. ನಿರ್ಧಾರವಾಗಿದೆ. ಗಬ್ಬರ್ ಸಿಂಗ್ ಟ್ಯಾಕ್ಸ್(ಜಿ.ಎಸ್.ಟಿ.) ಬಂದಾಗಿನಿಂದ ಜನರಿಗೆ ತೊಂದರೆಯಾಗಿದೆ ಎಂದು ದೂರಿದ್ದಾರೆ.

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ದಿ. ಧರಂಸಿಂಗ್ ಮತ್ತು ಮಾಜಿ ಸಚಿವ ದಿ. ಖಮರುಲ್ ಇಸ್ಲಾಂ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬದವರೊಂದಿಗೆ ಮಾತನಾಡಿದ್ದಾರೆ. ಅಲ್ಲಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ತೆರಳಿ, ಅನುಭವ ಮಂಟಪಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಅವರು ನಂತರ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.

ರಾಜ್ಯದಲ್ಲಿ 4 ದಿನಗಳ ಕಾಲ ಬಿರುಗಾಳಿ ಪ್ರವಾಸ ನಡೆಸಿದ ರಾಹುಲ್ ಗಾಂಧಿ ಪಕ್ಷದಲ್ಲಿ ಸಂಚಲನ ಮೂಡಿಸಿದ್ದು, ಬಿ.ಜೆ.ಪಿ. ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇವಾಲಯ, ಮಠ, ಮಂದಿರಗಳಿಗೆ ಭೇಟಿ ನೀಡಿದ್ದು, ಇದರೊಂದಿಗೆ ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...