alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಮೊದಲ ಹಂತದ ಪ್ರಚಾರಕ್ಕೆ ಮುಹೂರ್ತ ಫಿಕ್ಸ್

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಬಿ.ಜೆ.ಪಿ., ಜೆ.ಡಿ.ಎಸ್., ಕಾಂಗ್ರೆಸ್ ನಾಯಕರು ಈಗಾಗಲೇ ಪ್ರಚಾರ ಕೈಗೊಂಡಿದ್ದಾರೆ.

ಬಿ.ಜೆ.ಪಿ. ನಾಯಕರು ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿ ಮುಂದಿನ ಚುನಾವಣೆಗೆ ಕಾರ್ಯತಂತ್ರ ಹೆಣೆದಿದ್ದಾರೆ. ಈಗ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಅವರ ಮೊದಲ ಹಂತದ ಪ್ರಚಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಮೊದಲಾದ ನಾಯಕರು ಇಂದು ದೆಹಲಿಯಲ್ಲಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಫೆಬ್ರವರಿ 10 ರಿಂದ 3 ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬುದ್ಧಿಜೀವಿಗಳು, ರೈತರು, ವಿದ್ಯಾರ್ಥಿಗಳು, ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. ವಿವಿಧೆಡೆ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, 3 ದಿನಗಳ ಕಾಲ ಹಲವಾರು ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಗೆ ಮೊದಲ ಹಂತದ ಪ್ರಚಾರವನ್ನು ಭರ್ಜರಿಯಾಗಿ ಆರಂಭಿಸಲಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್, ಫಬ್ರವರಿ 10, 11, 12 ರಂದು ರಾಹುಲ್ ಗಾಂಧಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ವಿವಿಧ ವರ್ಗಗಳ ಜನರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...