alex Certify
ಕನ್ನಡ ದುನಿಯಾ       Mobile App
       

Kannada Duniya

2019 ರಲ್ಲಿ ‘ಕೈ’ಗೆ ಬಲ ಬಂದ್ರೆ ಪಿಎಂ ಆಗ್ತೇನೆ–ರಾಹುಲ್ ಗಾಂಧಿ

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹುಮುಖ್ಯ ಹೇಳಿಕೆಯೊಂದನ್ನು ನೀಡಿದ್ದಾರೆ. ಮಂಗಳವಾರ ಚುನಾವಣಾ ಪ್ರಚಾರ ನಡೆಸಿದ ರಾಹುಲ್ ಗಾಂಧಿ 2019 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ರೆ ಪ್ರಧಾನ ಮಂತ್ರಿಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.

2019 ರಲ್ಲಿ ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲ್ಲ ಎಂದು ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ. ನನ್ನ ಮಾತು ಕೇಳಿ ನೀವು ಈಗ ನಗಬಹುದು. ಆದ್ರೆ 2019 ರಲ್ಲಿ ಬಿಜೆಪಿ ಸರ್ಕಾರ ಬರಲು ಸಾಧ್ಯವೇ ಇಲ್ಲ. ವಿಪಕ್ಷಗಳೆಲ್ಲ ಒಂದಾಗಿರುವ ಕಾರಣ ಬಿಜೆಪಿ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂದಿದ್ದಾರೆ.

ವಿಚಾರವಾದಿಗಳೆಲ್ಲ ಒಂದಾಗಬೇಕು. ಮೂರೂ ಪಕ್ಷಗಳು ಒಂದಾದ್ರೆ ಬಿಜೆಪಿ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಲೂ ಸಾಧ್ಯವಿಲ್ಲ. ಕೆಲ ರಾಜ್ಯಗಳಲ್ಲಿ ಕಾಂಗ್ರೆಸ್ ಕಾರ್ಯತಂತ್ರ ಶುರು ಮಾಡಿದೆ. ನನ್ನ ರಾಜಕೀಯ ವಿಶ್ಲೇಷಣೆ ಸರಿಯಾಗಲಿದೆ. 2019 ರಲ್ಲಿ ಬಿಜೆಪಿ ಸೋಲಲಿದೆ ಎಂದು ರಾಹುಲ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...