alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಪಕೋಡಾ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯದಲ್ಲಿ ಈಗಾಗಲೇ ಮೂರು ದಿನಗಳ ಪ್ರವಾಸ ಮುಗಿಸಿ ವಾಪಾಸ್ ತೆರಳಿದ್ದಾರೆ.

ಈ ಮಧ್ಯೆ ಪ್ರವಾಸ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ನೀಡಿದ ಕೆಲ ಹೇಳಿಕೆಗಳಿಗೆ ವಿರೋಧ ವ್ಯಕ್ತವಾಗಿದೆ. ರಾಯಚೂರು ಭೇಟಿ ಸಂದರ್ಭದಲ್ಲಿ ರಾಹುಲ್ ಗಾಂಧಿ ಕಲ್ಮಲಾದ ಬೀದಿ ಬದಿ ಡಾಬಾವೊಂದರಲ್ಲಿ ಮಿರ್ಚಿ, ವಗ್ಗರಣೆ ಸವಿದಿದ್ದರು.

ಅಲ್ಲದೇ ಡಾಬಾ ಮಾಲೀಕರ ಬಳಿ ದಿನದ ಆದಾಯ ಎಷ್ಟು ಎಂದು ಪ್ರಶ್ನಿಸಿದ್ದು, ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡರೊಬ್ಬರು, ಪಕೋಡಾ ಮಾರುವವರನ್ನು ಕೀಳಾಗಿ ಕಾಣಬೇಡಿ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿಯವರಿಗೆ ಡಾಬಾ ಮಾಲೀಕರು ನೀಡಿದ ಉತ್ತರದಿಂದ ಶಾಕ್ ಆಗಿರಬಹುದು ಎಂದಿದ್ದಾರೆ.

ಈ ಮಧ್ಯೆ ಐಪಿಎಸ್ ಎಂದರೆ ಇಂಡಿಯನ್ ಪಕೋಡಾ ಸರ್ವೀಸ್ ಎಂದು ಹೇಳಿರುವ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಈ ಹೇಳಿಕೆ ನೀಡುವ ಮೂಲಕ ರಾಹುಲ್ ಪೊಲೀಸರನ್ನು ಅವಮಾನಿಸಿದ್ದಾರೆ. ಪ್ರತಿ ವೃತ್ತಿಗೂ ಅದರದ್ದೇ ಆದ ಘನತೆಯಿದ್ದು, ಅದನ್ನು ಗೌರವಿಸುವುದನ್ನು ಕಾಂಗ್ರೆಸ್ ನಾಯಕರು ಕಲಿಯಲಿ ಎಂದು ಟ್ವೀಟ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...