alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ. ಪಾಟೀಲ್ ಹೆಸರು ಫೈನಲ್?

ಕೆಪಿಸಿಸಿ ಅಧ್ಯಕ್ಷರಾಗಿರುವ ಜಿ. ಪರಮೇಶ್ವರ್, ಮೈತ್ರಿಕೂಟ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರಣ ಈ ಸ್ಥಾನಕ್ಕೆ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಅವರನ್ನು ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ನೂತನ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗದ ಕಾರಣ ಆ ಭಾಗದ ಪ್ರಭಾವಿ ಮುಖಂಡ ಎಚ್.ಕೆ. ಪಾಟೀಲರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದರೆ ಚುನಾವಣೆಯಲ್ಲಿ ಅನುಕೂಲವಾಗಲಿದೆ ಎಂಬ ಲೆಕ್ಕಾಚಾರ ಈ ನಿರ್ಧಾರದ ಹಿಂದಿದೆ ಎಂದು ಹೇಳಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಲು ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಕೇಂದ್ರ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದರೂ ಎಚ್.ಕೆ. ಪಾಟೀಲ್ ಅವರ ಹೆಸರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಸಿರು ನಿಶಾನೆ ತೋರಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...