alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ನಾಯಕರಿಗೆ ರಾಹುಲ್ ಶಾಕ್, ‘ಕೈ’ ನಾಯಕರ ದೆಹಲಿ ಪ್ರಯಾಣ ದಿಢೀರ್ ರದ್ದು

ಮೈತ್ರಿಕೂಟದ ಸರ್ಕಾರದ ಸಚಿವರುಗಳ ಪ್ರಮಾಣವಚನ ಸಮಾರಂಭ ಬುಧವಾರ ನಿಗದಿಯಾಗಿದ್ದು, ಕಾಂಗ್ರೆಸ್ ಸಚಿವರ ಪಟ್ಟಿಯನ್ನು ದೆಹಲಿಗೆ ತೆಗೆದುಕೊಂಡು ಹೋಗಲು ಸಜ್ಜಾಗಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಾಕ್ ನೀಡಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಆಜಾದ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮೂಲಕ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ರವಾನಿಸಿರುವ ರಾಹುಲ್ ಗಾಂಧಿ, ದೆಹಲಿಗೆ ರಾಜ್ಯ ಕಾಂಗ್ರೆಸ್ ನಾಯಕರು ಬರುವುದು ಬೇಡ. ಸಚಿವರ ಪಟ್ಟಿ ಕಳುಹಿಸಿದರೆ ಸಾಕು ಎಂಬ ಸಂದೇಶ ರವಾನಿಸಿದ್ದಾರೆ.

ಹೀಗಾಗಿ ಇಂದು ದೆಹಲಿಗೆ ತೆರಳಲು ಸಜ್ಜಾಗಿದ್ದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಹುಲ್ ಗಾಂಧಿ ಅವರ ಈ ಸೂಚನೆಯಿಂದಾಗಿ ತಮ್ಮ ಬೆಂಬಲಿಗ ಶಾಸಕರ ಪರವಾಗಿ ಸಚಿವಗಿರಿಗೆ ಲಾಬಿ ನಡೆಸಲು ಸಜ್ಜಾಗಿದ್ದ ಕಾಂಗ್ರೆಸ್ ನಾಯಕರಿಗೆ ತೀವ್ರ ನಿರಾಸೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...