alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಹೆಸರಲ್ಲಿ ನಕಲಿ ಶಿಫಾರಸ್ಸು ಪತ್ರ ಸೃಷ್ಟಿಸಿದ್ದ ಭೂಪ

rahul

ಬೆಂಗಳೂರು: ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಪಡೆಯಲು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಹೆಸರಲ್ಲಿ ನಕಲಿ ಶಿಫಾರಸ್ಸು ಪತ್ರ ನೀಡಿದ್ದಾನೆ.

2 ನೇ ಹಂತದಲ್ಲಿ ನಿಗಮ- ಮಂಡಳಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಶೀಘ್ರವೇ ಪಟ್ಟಿಯನ್ನು ಅಂತಿಮಗೊಳಿಸಿ ವರಿಷ್ಠರ ಒಪ್ಪಿಗೆ ಪಡೆದು ಪಟ್ಟಿಯನ್ನು ಪ್ರಕಟಿಸಲಿದ್ದಾರೆ.

ನಿಗಮ- ಮಂಡಳಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಅವಕಾಶ ಪಡೆಯಲು ಮುಂದಾಗಿದ್ದು, ತಮ್ಮ ನಾಯಕರ ಮೂಲಕ ಒತ್ತಡ ಹೇರತೊಡಗಿದ್ದಾರೆ.

ಬೆಳಗಾವಿ ಜಿಲ್ಲೆಯ ಸಂತೋಷ್ ಪಾಟೀಲ್ ಎಂಬಾತ, ರಾಹುಲ್ ಗಾಂಧಿ ಹೆಸರಿನಲ್ಲಿ ಶಿಫಾರಸ್ಸು ಪತ್ರ ಕೊಟ್ಟಿದ್ದಾನೆ. ತನಗೆ ಎನ್.ಡಬ್ಲ್ಯೂ.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಸ್ಥಾನ ನೀಡುವಂತೆ ರಾಹುಲ್ ಗಾಂಧಿಯವರು ನೀಡಿರುವಂತೆ ಪತ್ರ ಸೃಷ್ಠಿಸಿ, ಕೆ.ಪಿ.ಸಿ.ಸಿ. ಅಧ್ಯಕ್ಷರಿಗೆ ಸಲ್ಲಿಸಿದ್ದಾನೆ.

ಸಂತೋಷ್ ಗೆ ಎನ್.ಡಬ್ಲ್ಯೂ.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಸ್ಥಾನ ನೀಡುವಂತೆ ರಾಹುಲ್ ಗಾಂಧಿಯವರೇ ಶಿಫಾರಸ್ಸು ಪತ್ರ ನೀಡಿದ್ದರ ಬಗ್ಗೆ ಅನುಮಾನಗೊಂಡ ಪರಮೇಶ್ವರ್ ಈ ಕುರಿತಂತೆ ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿದ್ದಾರೆ. ಅವರು ಯಾವುದೇ ಶಿಫಾರಸ್ಸು ಪತ್ರ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದು, ಸಂತೋಷ್ ಪಾಟೀಲನೇ ರಾಹುಲ್ ಗಾಂಧಿ ಹೆಸರಲ್ಲಿ ನಕಲಿ ಶಿಪಾರಸ್ಸು ಪತ್ರ ಸೃಷ್ಠಿಸಿ ಸಹಿ ಮಾಡಿರುವುದು ಗೊತ್ತಾಗಿದೆ. ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...