alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಮೇಲೆ ಒತ್ತಡ

ಬೆಂಗಳೂರು: ಕರ್ನಾಟಕದ 28 ಲೋಕಸಭೆ ಕ್ಷೇತ್ರದ ಪೈಕಿ ಒಂದು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪಕ್ಷದ ರಾಜ್ಯ ನಾಯಕರು ಒತ್ತಾಯಿಸಿದ್ದಾರೆ.

ಹೈದ್ರಾಬಾದ್ ಕರ್ನಾಟಕದ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ರೆ ಉತ್ತರ ಕರ್ನಾಟಕ ಭಾಗದ ಲೋಕಸಭಾ ಕ್ಷೇತ್ರದ ಮೇಲೂ ಪರಿಣಾಮ ಬೀರುತ್ತದೆ. ಬಳ್ಳಾರಿ, ರಾಯಚೂರು, ಕೊಪ್ಪಳ, ಕಲ್ಬುರ್ಗಿ, ಬೀದರ್ ನಲ್ಲಿ ಇದು ಪರಿಣಾಮ ಬೀರಲಿದೆ. ಇನ್ನು ಇದಕ್ಕೆ ಹೊಂದಿಕೊಂಡಿರುವ ಮುಂಬೈ ಕರ್ನಾಟಕದ ಮೇಲೂ ಇದರ ಲಾಭವಾಗುತ್ತದೆ ಎಂದು ವಿವರಿಸಿರುವ ರಾಜ್ಯ ನಾಯಕರು, ಬೀದರ್ ಸಮಾವೇಶದ ಬಳಿಕ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರೊಂದಿಗೆ ಚರ್ಚಿಸುವಾಗ ಈ ಒತ್ತಾಯ ಕೇಳಿಬಂದಿದೆ.

ಅಲ್ಲದೇ ಪ್ರತಿ 20 ವರ್ಷಗಳಿಗೊಮ್ಮೆ ಕರ್ನಾಟಕದ ಮೂಲಕವೇ ಹೈಕಮಾಂಡ್ ಸ್ಟ್ರಾಂಗ್ ಆಗಿದೆ. ಈಗಲೂ ಅಂತದ್ದೇ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇಲ್ಲಿಂದಲೇ ಸ್ಪರ್ಧೆ ಮಾಡಿ ಅಂತ ಒತ್ತಾಯ ಮಾಡಿದ್ದಾರೆ. ಆದರೆ ಯಾವುದಕ್ಕೂ ಉತ್ತರ ಕೊಡದ ರಾಹುಲ್ ಇನ್ನು ಸಮಯ ಇದೆ ಅಂತ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...