alex Certify
ಕನ್ನಡ ದುನಿಯಾ       Mobile App
       

Kannada Duniya

ಸುದ್ದಿಗೋಷ್ಟಿಯಲ್ಲಿ ಪ್ರಧಾನಿ ಮೋದಿ ವಿರುದ್ದ ರಾಹುಲ್ ವಾಗ್ದಾಳಿ

ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ರಫೇಲ್ ಡೀಲ್ ನಿಂದ ಪ್ರಧಾನಿ ನರೇಂದ್ರ ಮೋದಿ ಮತ್ತವರ ಸ್ನೇಹಿತರಿಗೆ ಅನುಕೂಲವಾಗಿದೆಯೇ ಹೊರತು ಬೇರ್ಯಾರಿಗೂ ಅಲ್ಲ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಹೆಚ್.ಎ.ಎಲ್. ನಷ್ಟ ಅನುಭವಿಸುವಂತಾಯಿತು ಎಂದು ರಾಹುಲ್ ಹೇಳಿದರು.

ಯಡಿಯೂರಪ್ಪ, ರೆಡ್ಡಿ ಸಹೋದರರನ್ನು ಜೊತೆಗಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಹೇಗೆ ಮತ ಯಾಚಿಸುತ್ತಾರೆ ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ, ಕರ್ನಾಟಕದ ಜನತೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣಾ ಪ್ರಚಾರ ಸಂದರ್ಭದಲ್ಲಿ ನರೇಂದ್ರ ಮೋದಿಯವರು ರಾಷ್ಟ್ರ ಹಾಗೂ ರಾಜ್ಯದ ಸಮಸ್ಯೆಗಳನ್ನು ಪ್ರಸ್ತಾಪಿಸದೆ ಕೇವಲ ವೈಯಕ್ತಿಕ ತೇಜೋವಧೆಗೆ ಆದ್ಯತೆ ನೀಡಿದ್ದಾರೆ. ಈ ಮೂಲಕ ಪ್ರಧಾನಿ ಹುದ್ದೆಗೆ ಅಗೌರವ ತಂದಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಎಂದಿಗೂ ವೈಯಕ್ತಿಕ ಟೀಕೆಗೆ ಮುಂದಾಗಲಿಲ್ಲವೆಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...