alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಶಿವಮೊಗ್ಗ ಭೇಟಿ ವೇಳೆ ವಾಹನ ಸವಾರರ ಪರದಾಟ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರೋಡ್ ಶೋ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹಲವು ಮಾರ್ಗಗಳ ಸಂಚಾರದಲ್ಲಿ ಬದಲಾವಣೆ ಮಾಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

ನಿನ್ನೆಯಿಂದಲೇ ಪೊಲೀಸರು ಸಿದ್ದತೆ ನಡೆಸಿದ್ದು, ಇಂದು ಬೆಳಿಗ್ಗೆಯಿಂದ ನಗರಕ್ಕೆ ಪ್ರವೇಶಿಸುವ ಮತ್ತು ನಗರದಿಂದ ಹೊರಹೋಗುವ ಬಸ್ ಹಾಗೂ ವಾಹನಗಳ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಿದ್ದರು.

ಬಿ.ಹೆಚ್. ರಸ್ತೆ, ನೆಹರೂ ರಸ್ತೆ, ಗೋಪಿ ವೃತ್ತ, ಹೆಲಿಪ್ಯಾಡ್ ಸರ್ಕಲ್ ಮೊದಲಾದ ಕಡೆಗಳಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ನಗರ ಪ್ರವೇಶಿಸುವ ಬಸ್ ಇತರೆ ವಾಹನಗಳಿಗೆ ಹೊರ ಮಾರ್ಗಗಳ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದ್ದರಿಂದ ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆ, ಕಚೇರಿ ಕೆಲಸಗಳಿಗೆ ತೆರಳುವವರು ಅಸಮಾಧಾನ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ಶಿವಮೊಗ್ಗ ಭೇಟಿಗೂ ಒಂದು ಗಂಟೆ ಮೊದಲೇ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಪ್ರಮುಖ ರಸ್ತೆಗಳಲ್ಲದೇ ಸಂಪರ್ಕ ರಸ್ತೆಗಳಲ್ಲೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರಿಂದ ಗಂಟೆಗಟ್ಟಲೆ ಉರಿಬಿಸಿಲಿನಲ್ಲೇ ಕಾಯುವಂತಾಯಿತು.

ಸಾಗರ ರಸ್ತೆಯ ಹೆಲಿಪ್ಯಾಡ್ ನಿಂದ ರೋಡ್ ಶೋ ನಡೆಸಿದ್ದರ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದ ರೋಗಿಗಳು ಹಾಗೂ ಅವರ ಬಂಧುಗಳು ಪರದಾಡುವಂತಾಯಿತು. ಪರಿಪರಿಯಾಗಿ ಕೇಳಿಕೊಂಡರೂ ಬಂದೋಬಸ್ತ್ ಉಸ್ತುವಾರಿ ವಹಿಸಿಕೊಂಡಿದ್ದ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕರತ್ತ ಕನಿಷ್ಟ ಸೌಜನ್ಯ ತೋರಿಸಲಿಲ್ಲ. ಇದು ಇನ್ನಷ್ಟು ಅಸಮಾಧಾನಕ್ಕೆ ಕಾರಣವಾಯಿತು.

ಪ್ರಮುಖ ಸಂಪರ್ಕ ರಸ್ತೆಗಳನ್ನೇ ಬಂದ್ ಮಾಡಿದ್ದರಿಂದ ವಾಹನ ಸವಾರರು ಪಕ್ಷದ ಮುಖಂಡರು ಮತ್ತು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಘಟನೆಯೂ ನಡೆಯಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...