alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಜೊತೆ ಸಿದ್ದರಾಮಯ್ಯ ಮಹತ್ವದ ಭೇಟಿ

ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದು, ಈ ವೇಳೆ ರಾಹುಲ್ ಗಾಂಧಿಯವರೊಂದಿಗೆ ರಾಜ್ಯ ರಾಜಕೀಯ ಹಾಗೂ ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಖಾಲಿ ಇರುವ ಸಚಿವ ಸ್ಥಾನ ಭರ್ತಿ ಮಾಡುವ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ಕೂಡ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗುವ ಸಾಧಕ ಬಾಧಕಗಳ ಕುರಿತೂ ಸಿದ್ದರಾಮಯ್ಯನವರು ಪಕ್ಷದ ವರಿಷ್ಟರೊಂದಿಗೆ ಚರ್ಚೆ ನಡೆಸಿರುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...