alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಶಿವಮೊಗ್ಗ ಭೇಟಿಗೆ ಭರ್ಜರಿ ಸಿದ್ದತೆ

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣಾ ಕಾವು ಏರತೊಡಗಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶಿವಮೊಗ್ಗಕ್ಕೆ ಬಂದು ಹೋದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ.

ಏ.3 ರಂದು ರಾಹುಲ್ ಗಾಂಧಿ ಶಿವಮೊಗ್ಗದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದು, ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ಜಿಲ್ಲೆಗೆ ಆಗಮಿಸಿ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಗ್ಗೆ 11.45 ಕ್ಕೆ ಹೆಲಿಕಾಪ್ಟರ್ ಮೂಲಕ ರಾಹುಲ್ ಗಾಂಧಿ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ನಂತರ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ನಗರದ ಬಿ.ಹೆಚ್. ರಸ್ತೆ, ನೆಹರೂ ರಸ್ತೆಯಲ್ಲಿ ರೋಡ್ ಶೋ ನಡೆಯಲಿದ್ದು, ಗೋಪಿ ವೃತ್ತದಲ್ಲಿ ಬಹಿರಂಗ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ರಾಹುಲ್ ಗಾಂಧಿ ಭೇಟಿ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಭದ್ರತಾ ಕ್ರಮ ಕೈಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...