alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಮೂವರು ಸಾವು, 20 ಮಂದಿ ಗಂಭೀರ

raichur

ರಾಯಚೂರು: ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿಯಾಗಿ ಬಿದ್ದಿದ್ದು, ಮೂವರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಚವಳಗೇರಾ ಬಳಿ ನಡೆದಿದೆ.

ಬೆಳಗ್ಗೆ ಉದ್ಯೋಗ ಖಾತ್ರಿ ಯೋಜನೆ ಕೆಲಸಕ್ಕೆಂದು ಕಾರ್ಮಿಕರು ಟ್ರ್ಯಾಕ್ಟರ್ ನಲ್ಲಿ ಹೊರಟಿದ್ದು, ಕಿರಿದಾದ ರಸ್ತೆಯಲ್ಲಿ ಚಾನಲ್ ಏರಿ ಮೇಲೆ ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಯಾಗಿದೆ.

ಹುಸೇನ್ ಪಾಶ(30) ಸೇರಿದಂತೆ ಮೂವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಂಧನೂರು ಆಸ್ಪತ್ರೆಗೆ ಸೇರಿಸಲಾಗಿದ್ದು, 8 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.

ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ಸಂಪೂರ್ಣ ಜಖಂಗೊಂಡಿದೆ. ಬಳಗಾನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...