alex Certify
ಕನ್ನಡ ದುನಿಯಾ       Mobile App
       

Kannada Duniya

ಪುಕ್ಸಟ್ಟೆ ಡೀಸೆಲ್ ಗೆ ಮುಗಿಬಿದ್ದ ಜನ

ರಾಯಚೂರು: ಟ್ಯಾಂಕರ್ ಪಲ್ಟಿಯಾಗಿ ಸೋರಿಕೆಯಾಗುತ್ತಿದ್ದ ಡೀಸೆಲ್ ತುಂಬಿಕೊಳ್ಳಲು ಜನ ಮುಗಿಬಿದ್ದ ಘಟನೆ, ರಾಯಚೂರು ಜಿಲ್ಲೆ ಸಿರವಾರ ಸಮೀಪ ನಡೆದಿದೆ.

ಕಲಬುರಗಿಯಿಂದ ಸಿರವಾರದ ಕಡೆಗೆ ತೆರಳುತ್ತಿದ್ದ ಡೀಸೆಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತ ನಡೆದ ಸ್ಥಳದಿಂದ ಸ್ಪಲ್ಪ ದೂರದಲ್ಲೇ ಮತ್ತೊಂದು ಟ್ಯಾಂಕರ್ ಪಲ್ಟಿಯಾಗಿದ್ದು, ಇದರಿಂದಾಗಿ ಟ್ಯಾಂಕರ್ ಗಳಲ್ಲಿದ್ದ ಡೀಸೆಲ್ ಸೋರಿಕೆಯಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿ ಬಂದ ಸ್ಥಳೀಯರು ಕ್ಯಾನ್, ಕೊಡಗಳಲ್ಲಿ ಸೋರಿಕೆಯಾಗುತ್ತಿದ್ದ ಡೀಸೆಲ್ ತುಂಬಿಸಿಕೊಂಡಿದ್ದಾರೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಎರಡೂ ಲಾರಿಗಳ ಚಾಲಕರು, ಕ್ಲೀನರ್ ಪಾರಾಗಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಸಿರವಾರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿದ್ದ ಜನರನ್ನು ಚದುರಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...