alex Certify
ಕನ್ನಡ ದುನಿಯಾ       Mobile App
       

Kannada Duniya

ಕರೆಂಟ್ ಬಿಲ್ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ

ರಾಯಚೂರು: ಬಾಕಿ ಉಳಿಸಿಕೊಂಡ ವಿದ್ಯುತ್ ಬಿಲ್ ಕೇಳಿದ್ದಕ್ಕೆ, ಜೆಸ್ಕಾಂ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಮುಕ್ಕುಂದ ಗ್ರಾಮದಲ್ಲಿ ನಡೆದಿದೆ.

ಜೆಸ್ಕಾಂ ಪ್ರತಿನಿಧಿಗಳಾದ ಲಕ್ಷ್ಮಿಕಾಂತ್ ರೆಡ್ಡಿ, ಶರಣಪ್ಪ ಹಲ್ಲೆಗೆ ಒಳಗಾದವರು. ಆಲಂ ಪಾಶ ಮತ್ತು ಪಾಶಾ ಸಾಬ್ ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಬೆಳಿಗ್ಗೆ ಅವರ ಮನೆ ಬಳಿ ಹೋಗಿ ಬಿಲ್ ಕಟ್ಟುವಂತೆ ತಿಳಿಸಲಾಗಿದೆ.

ಈ ವೇಳೆ ಮಾತಿಗೆ ಮಾತು ಬೆಳೆದು, ಹಲ್ಲೆ ನಡೆಸಲಾಗಿದ್ದು, ಗಾಯಗೊಂಡಿರುವ ಲಕ್ಷ್ಮಿಕಾಂತ್ ರೆಡ್ಡಿ ಮತ್ತು ಶರಣಪ್ಪರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸಿಂಧನೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...