alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ಪ- ಮಗಳ ಸಾವಿಗೆ ಕಾರಣವಾಯ್ತು ಫೇಸ್ ಬುಕ್ ನಲ್ಲಿ ಪೋಸ್ಟ್ ಆದ ಫೋಟೋ

ರಾಯಚೂರು: ಸಾಮಾಜಿಕ ಜಾಲಾತಾಣ ಫೇಸ್ ಬುಕ್ ಗೆ ಫೋಟೋ ಪೋಸ್ಟ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ, ತಂದೆ, ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿಂಧನೂರು ಸಮೀಪದ ಗೌಡನಬಾವಿಯ ರಾಮನಗೌಡ(55), ಅವರ ಪುತ್ರಿ ಬಸವಲಿಂಗಮ್ಮ(22) ಆತ್ಮಹತ್ಯೆ ಮಾಡಿಕೊಂಡವರು. ಗ್ರಾಮದ ಕೆಲವು ಯುವಕರು ಬಸವಲಿಂಗಮ್ಮರ ಫೋಟೋ ತೆಗೆದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿದೆ.

ಬಸವಲಿಂಗಮ್ಮ ಕಡೆಯವರ ಮೇಲೆ ಯುವಕರು ಹಲ್ಲೆ ಮಾಡಿದ್ದರೆನ್ನಲಾಗಿದೆ. ಇದರಿಂದ ಮನನೊಂದ ರಾಮನಗೌಡ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಲಿಂಗಮ್ಮ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಬಳಗಾನೂರು ಠಾಣೆ ಪೊಲೀಸರು ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...