alex Certify
ಕನ್ನಡ ದುನಿಯಾ       Mobile App
       

Kannada Duniya

ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಪ್ರವಾಸಿಗರು

ರಾಯಚೂರು: ಜಲಪಾತ ವೀಕ್ಷಣೆಗೆ ಬಂದು ನೀರಿನಲ್ಲಿ ಕೊಚ್ಚಿ ಹೋಗಿದ್ದ 6 ಮಂದಿಯನ್ನು ರಕ್ಷಿಸಿದ ಘಟನೆ ರಾಯಚೂರು ಜಿಲ್ಲೆ ಲಿಂಗಸೂರು ತಾಲ್ಲೂಕಿನ ಗೋಲಪಲ್ಲಿ ಗುಂಡಲಬಂಡೆ ಬಳಿ ನಡೆದಿದೆ.

ಬೇಸಿಗೆಯಲ್ಲಿ ನೀರಿಲ್ಲದೇ ಬತ್ತಿ ಹೋಗುವ ಈ ಪ್ರದೇಶದಲ್ಲಿ ಮಳೆಗಾಲದಲ್ಲಿ ನಾರಾಯಣಪುರ ಬಲದಂಡೆ ಕಾಲುವೆ ನೀರು ಹರಿದು ಜಲಪಾತ ಸೃಷ್ಠಿಯಾಗುತ್ತದೆ.

ಇದನ್ನು ನೋಡಲು ಸುತ್ತಲಿನ ಪ್ರದೇಶಗಳ ಹೆಚ್ಚಿನ ಮಂದಿ ಆಗಮಿಸುತ್ತಾರೆ. ಹೀಗೆ ಜಲಪಾತ ನೋಡಲು ಬಂದು ನೀರಿಗೆ ಇಳಿದಿದ್ದ 8 ಮಂದಿಯಲ್ಲಿ 6 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ನೀರು ಹರಿವಿನ ನಡುವೆ ಬಂಡೆಗಳ ಮೇಲೆ ರಕ್ಷಣೆ ಪಡೆದುಕೊಂಡ 6 ಮಂದಿಯನ್ನು ಸ್ಥಳೀಯರು, ಪೊಲೀಸರು ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಅಪಾಯದಲ್ಲಿದ್ದ 6 ಮಂದಿಯನ್ನು ರಕ್ಷಿಸಿದ ಈ ಕಾರ್ಯಾಚರಣೆಯ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...