alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿಗರೇ ಎಚ್ಚರ: ಇಂದಿನಿಂದ 3 ದಿನಗಳ ಕಾಲ ಸುರಿಯಲಿದೆ ಮಳೆ

ಗಜ ಚಂಡಮಾರುತದ ಪರಿಣಾಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಸ್ವಲ್ಪ ಮಳೆ ಸುರಿದರೂ ಸಹ ಜನ ಜೀವನ ಅಸ್ತವ್ಯಸ್ತಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗ್ರತೆಯಿಂದ ಇರುವುದು ಒಳಿತು. ಅದರಲ್ಲೂ ಮಳೆ ಬರುವ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯುವುದು ಸೂಕ್ತವಲ್ಲ.

ತಗ್ಗು ಪ್ರದೇಶದಲ್ಲಿ ವಾಸಿಸುವ ಜನತೆ ಸಹ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ. ಈ ಹಿಂದಿನ ಅನುಭವಗಳಿಂದ ಪಾಠ ಕಲಿಯಬೇಕಿರುವ ಬಿಬಿಎಂಪಿ ಒಂದೊಮ್ಮೆ ಈ ಬಾರಿ ಮಳೆ ಸುರಿದರೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...