alex Certify
ಕನ್ನಡ ದುನಿಯಾ       Mobile App
       

Kannada Duniya

ವರುಣಾರ್ಭಟಕ್ಕೆ ಸಿಲಿಕಾನ್ ಸಿಟಿ ಜನ ತತ್ತರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಜನ ತತ್ತರಿಸಿದ್ದಾರೆ. ಮಳೆಯ ಆರ್ಭಟಕ್ಕೆ ವಾಹನ ಸವಾರರು ಮನೆ ಸೇರಲು ಪರದಾಡಿದ್ದಾರೆ.

ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು, ಇದನ್ನು ತೆರವುಗೊಳಿಸಲು ಜನ ರಾತ್ರಿಯಿಡಿ ಜಾಗರಣೆ ಮಾಡಿದ್ದಾರೆ. ಅಪಾರ್ಟ್ ಮೆಂಟ್ ಗಳಲ್ಲಿನ ಬೇಸ್ ಮೆಂಟ್ ನಲ್ಲಿ ನೀರು ತುಂಬಿಕೊಂಡಿದ್ದು, ವಾಹನಗಳನ್ನು ಹೊರ ತೆಗೆಯಲು ನಿವಾಸಿಗಳು ಹರಸಾಹಸ ನಡೆಸಿದ್ದಾರೆ.

ಕಾರೊಂದು ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದು, ಬಳಿಕ ಸಾರ್ವಜನಿಕರ ನೆರವಿನಿಂದ ಅದನ್ನು ಹೊರ ತೆಗೆಯಲಾಗಿದೆ. ಇನ್ನೂ ಎರಡು-ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹೇಳಲಾಗಿದ್ದು, ಜನತೆ ಆತಂಕಕ್ಕೊಳಗಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...