alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆ ಅವಾಂತರ: ಸೇತುವೆ ಕುಸಿತ, ವಿದ್ಯುತ್ ಸಂಪರ್ಕ ಕಡಿತ

ಚಿಕ್ಕಮಗಳೂರು: ವಾಯುಭಾರ ಕುಸಿತದಿಂದ ಸುರಿದ ಅಕಾಲಿಕ ಮಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವಾಂತರ ಸೃಷ್ಠಿಸಿದೆ. ಚಿಕ್ಕಮಗಳೂರು –ಮೂಡಿಗೆರೆಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು, ಸಂಪರ್ಕ ಕಡಿತಗೊಂಡಿದೆ. ಬೇರೆ ಮಾರ್ಗಗಳ ಮೂಲಕ ವಾಹನಗಳು ಸಂಚರಿಸುವಂತಾಗಿದೆ.

ರಸ್ತೆ ಬದಿಯ ಮರಗಳು, ಮನೆ ಮುಂದಿನ ತೆಂಗಿನ ಮರಗಳು ಬಿದ್ದಿವೆ. ರಸ್ತೆಗೆ ಮರಗಳು ಉರುಳಿಬಿದ್ದ ಪರಿಣಾಮ ಅನೇಕ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇನ್ನೂ ಅನೇಕ ಕಡೆ ಮರಬಿದ್ದು ವಾಹನಗಳಿಗೆ ಹಾನಿಯಾಗಿದೆ. ಬಾಳೆಹೊನ್ನೂರಿನಲ್ಲಿ ಅಂಗಡಿ ಬಳಿ ನಿಂತಿದ್ದವರ ಮೇಲೆ ಮರ ಬಿದ್ದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

ಬಾಳೆಹೊನ್ನೂರು, ಜಯಪುರ, ಶೃಂಗೇರಿ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಲೈನ್ ತುಂಡಾಗಿ ಜನ ಕತ್ತಲಲ್ಲಿ ಕಾಲಕಳೆಯುವಂತಾಗಿದೆ. ದುರಸ್ತಿಗೆ 2 ದಿನ ಬೇಕಾಗಬಹುದೆಂದು ಹೇಳಲಾಗಿದೆ. ಒಟ್ಟಿನಲ್ಲಿ ಅಕಾಲಿಕ ಮಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವಾಂತರವನ್ನು ಸೃಷ್ಠಿಸಿದ್ದು, ಜನ ಹೈರಾಣಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...