alex Certify
ಕನ್ನಡ ದುನಿಯಾ       Mobile App
       

Kannada Duniya

ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಶಿವಮೊಗ್ಗ: ಭಾರೀ ಮಳೆಯಿಂದಾಗಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿ ಮನೆಯ ಗೋಡೆ ಕುಸಿದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಲಾಗಿದೆ.

ಕೋಣಂದೂರು ಕೆಇಬಿ ಹಿಂಭಾಗದಲ್ಲಿ ಕೂಲಿ ಕಾರ್ಮಿಕ ಅಯೂಬ್ ಎಂಬುವರ ಮನೆ ಗೋಡೆ ಕುಸಿದು ಅವರ 4 ವರ್ಷದ ಪುತ್ರ ಮಸೂದ್ ಮೃತಪಟ್ಟಿದ್ದ. ಸ್ಥಳಕ್ಕೆ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಸೇರಿದಂತೆ ಹಲವರು ಭೇಟಿ ನೀಡಿದ್ದರು.

ಅವರ ಕುಟುಂಬದವರಿಗೆ ಜಿಲ್ಲಾಡಳಿತದಿಂದ ಪರಿಹಾರದ ಚೆಕ್ ವಿತರಿಸಿ ಸಾಂತ್ವಾನ ಹೇಳಲಾಯಿತು. ಸರ್ಕಾರದ ವಸತಿ ಯೋಜನೆಯಡಿ ಅಯೂಬ್ ಕುಟುಂಬದವರಿಗೆ ವಸತಿ ಕಲ್ಪಿಸಲು ಹಾಗೂ ಶಿಥಿಲಾವಸ್ಥೆಯಲ್ಲಿರುವ ಮನೆಯನ್ನು ಗುರುತಿಸಿ ಕೂಡಲೇ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...