alex Certify
ಕನ್ನಡ ದುನಿಯಾ       Mobile App
       

Kannada Duniya

ವಾಯುಭಾರ ಕುಸಿತ: ಕರಾವಳಿಯಲ್ಲಿ ಭಾರೀ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗ್ತಿದೆ. ಕೇರಳದಲ್ಲಿ ನಿಮ್ನ ಚಂಡಮಾರುತದ ಎಫೆಕ್ಟ್ ನಿಂದಾಗಿ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಾಗ್ತಿದೆ.

ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಕಾರ್ಕಳ, ಹೆಬ್ರಿ ಮೊದಲಾದ ಕಡೆಗಳಲ್ಲಿ ಸಂಜೆಯಿಂದ ನಿರಂತರವಾಗಿ ಮಳೆಯಾಗುತ್ತಿದೆ. ಭಾರೀ ಗಾಳಿ, ಮಳೆಯಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ರಾಜ್ಯದಲ್ಲಿ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತವಾಗಿದ್ದು, ಅರಬ್ಬೀ ಸಮುದ್ರದ ಭಾಗಕ್ಕೆ ಸಾಗಿದೆ. ಕೇರಳದಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತವಾಗಿ ಪರಿವರ್ತನೆಯಾಗ್ತಿದೆ. ರಾಜ್ಯದ ಕರಾವಳಿ ಮಾತ್ರವಲ್ಲದೇ, ಮಲೆನಾಡು, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...