alex Certify ಸಿಡಿಲಿಗೆ ನಾಲ್ವರು ಬಲಿ, ರಾಜ್ಯದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿಲಿಗೆ ನಾಲ್ವರು ಬಲಿ, ರಾಜ್ಯದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಕಾಣಿಸಿಕೊಳ್ಳಲಿರುವ ಪರಿಣಾಮ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಜನ ತತ್ತರಿಸಿದ್ದು, ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ. ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 204 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚಂಡಮಾರುತದ ಪ್ರಭಾವದಿಂದ ಇನ್ನು ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹುಬ್ಬಳ್ಳಿ ತಾಲ್ಲೂಕಿನಲ್ಲಿ 14 ವರ್ಷದ ಬಾಲಕ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಹಿರೇಕೆರೂರ ತಾಲೂಕು ಹೊಸನಿಡನೇಗಿಲು ಗ್ರಾಮದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಂಜವ್ವ, ಉತ್ತರಕನ್ನಡಜಿಲ್ಲೆಯ ಗೋಕರ್ಣದಲ್ಲಿ 37 ವರ್ಷದ ಮಹಿಳೆ ಸಿಡಿಲಿಗೆ ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ ಡಣಾಪುರದಲ್ಲಿ ರೈತರೊಬ್ಬರು ಸಿಡಿಲಿನ ಆಘಾತಕ್ಕೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...