alex Certify
ಕನ್ನಡ ದುನಿಯಾ       Mobile App
       

Kannada Duniya

ಕಂದಕಕ್ಕೆ ಬಿದ್ದ ಟ್ಯಾಂಕರ್; ಮೂವರ ಸಾವು

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿ 30 ಅಡಿ ಕಂದಕಕ್ಕೆ ಟ್ಯಾಂಕರ್ ಬಿದ್ದು ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ಸತತ ಭೂಕುಸಿತವಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು-ಮಂಗಳೂರು ಮಾರ್ಗವಾಗಿ ಸಂಚರಿಸುವ ಎಲ್ಲಾ ಐಷಾರಾಮಿ ಬಸ್ಸುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಭಾರೀ ವಾಹನಗಳ ಸಂಚಾರಕ್ಕೆ ಆಗಸ್ಟ್ 25 ರವರೆಗೆ ಹಾಸನ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಶಿರಾಡಿ ಘಾಟ್ ಗೆ ಬದಲು ಚಾರ್ಮಾಡಿ ಘಾಟ್ ರಸ್ತೆ ಬಳಸುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ.

ಇನ್ನು ಕೊಡಗಿನ ಕಾಲೂರು ಗ್ರಾಮದಲ್ಲಿ ಸಂಭವಿಸಿದ ಭೂಕುಸಿತಕ್ಕೆ 7 ಕುಟುಂಬಸ್ಥರು ಜೀವ ಕಳೆದುಕೊಂಡಿದ್ದಾರೆ. ಕುಶಾಲನಗರದಲ್ಲಿ ಪರಿಹಾರ ಕಾರ್ಯಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಲಾಗಿದೆ. ತುಂಗಾ ಮತ್ತು ಭದ್ರಾ ಅಣೆಕಟ್ಟುಗಳಿಂದ ನೀರು ಹೊರಬಿಟ್ಟ ಕಾರಣ ದಾವಣಗೆರೆ, ಹೊನ್ನಾಳಿ ಮತ್ತು ಹರಿಹರ ತಾಲ್ಲೂಕುಗಳಲ್ಲಿ ಪ್ರವಾಹ ಉಂಟಾಗಿದೆ. ಪುನರ್ವಸತಿ ಕಾರ್ಯಕ್ಕೆ 100 ಕೋಟಿ ರೂ. ಪ್ಯಾಕೇಜ್ ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಕೇಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...