alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ

rain 123

ಬೆಂಗಳೂರು: ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನದಿ, ಕೆರೆ, ಕಟ್ಟೆಗಳು ತುಂಬುವ ಹಂತಕ್ಕೆ ಬಂದಿವೆ ಭೀಮಾ ನದಿಯಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ.

ಯಾದಗಿರಿ ಜಿಲ್ಲೆ ಶಹಾಪೂರ ತಾಲ್ಲೂಕಿನ ಕುರಸಗಂಡಗಿ ಗ್ರಾಮ ಜಲಾವೃತಗೊಂಡಿದೆ. ಚಿತ್ತಾಪುರ ತಾಲ್ಲೂಕಿನ ಬ್ಯಾರೇಜ್ ಓಪನ್ ಮಾಡದ ಕಾರಣ, ಹೆಚ್ಚಿನ ಪ್ರಮಾಣದಲ್ಲಿ ನೀರು ನಿಂತಿದ್ದು, ಅದು ಗ್ರಾಮಕ್ಕೆ ನುಗ್ಗಿದೆ ಎನ್ನಲಾಗಿದೆ. ಗ್ರಾಮದ ಮನೆಗಳಿಗೆಲ್ಲಾ ನೀರು ನುಗ್ಗಿ ದವಸ, ಧಾನ್ಯಗಳೆಲ್ಲಾ ಹಾಳಾಗಿವೆ. ಜನ ಎತ್ತರದ ಪ್ರದೇಶ ಮತ್ತು ದೇವಾಲಯಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ನಿರಂತರ ಮಳೆಯಾಗುತ್ತಿರುವುದರಿಂದ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎನ್ನಲಾಗಿದೆ.

ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ನದಿ, ಹಳ್ಳ ಕೊಳ್ಳಗಳಲ್ಲಿ ಪ್ರವಾಹ ಸ್ಥೀತಿ ಉಂಟಾಗಿದ್ದು, ಕೆಲವೆಡೆ ಸೇತುವೆ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಜಮೀನುಗಳಿಗೆ, ಮನೆಗಳಿಗೆ ನೀರು ನುಗ್ಗಿದ್ದು, ಇದರಿಂದಾಗಿ ಭಾರೀ ಹಾನಿ ಸಂಭವಿಸಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...