alex Certify
ಕನ್ನಡ ದುನಿಯಾ       Mobile App
       

Kannada Duniya

ಒತ್ತುವರಿಗೆ ಸಹಕರಿಸಿದ್ದವರಿಗೆ ಸಂಕಷ್ಟ

cm letterಬೆಂಗಳೂರು: ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಕಟ್ಟಡಗಳ ತೆರವು ಮಾಡುವ ಕಾರ್ಯಾಚರಣೆ ಇಂದು ಐದನೇ ದಿನಕ್ಕೆ ಕಾಲಿಟ್ಟಿದ್ದು, ಬೊಮ್ಮಸಂದ್ರದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಮಧ್ಯೆ ರಾಜ ಕಾಲುವೆ ಒತ್ತುವರಿಗೆ ಸಹಕರಿಸಿದ್ದ 20 ಮಂದಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಇದರಲ್ಲಿ 13 ಮಂದಿ ಹಾಲಿ ಮತ್ತು 7 ಮಂದಿ ನಿವೃತ್ತ ಅಧಿಕಾರಿಗಳು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಹಾಲಿ ಅಧಿಕಾರಿಗಳ ಅಮಾನತ್ತಿಗೂ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ರಾಜ ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಹಲವರು ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಈ ಅಕ್ರಮ ನಿರ್ಮಾಣಗಳಿಗೆ ಸಹಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ರಾಜ ಕಾಲುವೆಗಳನ್ನು ಒತ್ತುವರಿ ಮಾಡಿ ನಿರ್ಮಿಸಿರುವ ಬಡಾವಣೆಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಸಹಕರಿಸಿದ ಆರೋಪ ಅಧಿಕಾರಿಗಳ ಮೇಲಿದೆ. ಜೊತೆಗೆ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳಿಗೆ ಈ ಅಧಿಕಾರಿಗಳು ನಕ್ಷೆ ಮಂಜೂರು ಮಾಡಿದ್ದಾರೆ. ಖಾತಾ ಸಹ ಮಾಡಿಕೊಟ್ಟಿದ್ದಾರೆ.


ಇತ್ತೀಚೆಗೆ ಭಾರಿ ಮಳೆಯಿಂದಾಗಿ ಅನಾಹುತ ಸಂಭವಿಸಿದಾಗ ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿದ್ದ ಮುಖ್ಯಮಂತ್ರಿಯವರು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಜೊತೆಗೆ ಅಕ್ರಮ ನಿರ್ಮಾಣಗಳಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...