alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ನಲ್ಲಿ ಸಿಎಂ ಪುತ್ರನ ನಿಂದಿಸಿದ್ದವರ ವಿರುದ್ದ ಕೇಸ್

rakeshsid_072816-1ಅನಾರೋಗ್ಯದಿಂದಾಗಿ ಬೆಲ್ಜಿಯಂನಲ್ಲಿ ವಿಧಿವಶರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಸಿದ್ದರಾಮಯ್ಯನವರನ್ನು ನಿಂದಿಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಇಬ್ಬರ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಯಚೂರು ಜಿಲ್ಲೆ ಲಿಂಗಸಗೂರಿನ ನವೀನ್ ಹಾಗೂ ಶರಣಬಸವ ಎಂಬಿಬ್ಬರು ರಾಕೇಶ್ ಸಿದ್ದರಾಮಯ್ಯನವರು ನಿಧನರಾದ ಸಂದರ್ಭದಲ್ಲಿ ಅವರನ್ನು ನಿಂದಿಸಿ, ಅವಾಚ್ಯ ಶಬ್ದದ ಪೋಸ್ಟ್ ಅನ್ನು ಫೇಸ್ ಬುಕ್ ನಲ್ಲಿ ಹಾಕಿದ್ದರೆನ್ನಲಾಗಿದೆ.

ಈ ಕುರಿತು ಗದೆಪ್ಪಗೌಡ ಎಂಬವರು ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಲಂ 504 ಹಾಗೂ 506 ರಡಿ ನವೀನ್ ಹಾಗೂ ಶರಣಬಸವ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...