alex Certify
ಕನ್ನಡ ದುನಿಯಾ       Mobile App
       

Kannada Duniya

ವಸ್ತು ಪ್ರದರ್ಶನ ಮೈದಾನದಲ್ಲಿ ಕಿಕ್ಕಿರಿದ ಜನಸ್ತೋಮ

rakesh siddaramaiahಅನಾರೋಗ್ಯದಿಂದ ಜುಲೈ 30 ರಂದು ಬೆಲ್ಜಿಯಂನಲ್ಲಿ ವಿಧಿವಶರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಸಿದ್ದರಾಮಯ್ಯನವರ ಅಂತ್ಯಸಂಸ್ಕಾರ ಇಂದು, ಟಿ ಕಾಟೂರಿನ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ.

ಅದಕ್ಕೂ ಮುನ್ನ ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ರಾಕೇಶ್ ಅವರ ಪಾರ್ಥಿವ ಶರೀರವನ್ನಿಡಲಾಗಿದ್ದು, ಸಚಿವರು, ಶಾಸಕರು, ವಿವಿಧ ಪಕ್ಷಗಳ ಪ್ರಮುಖರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ನೆರೆದಿದ್ದಾರೆ.

ಮೈಸೂರು ಮಾತ್ರವಲ್ಲದೇ ರಾಜ್ಯದ ವಿವಿಧೆಡೆಗಳಿಂದ ಸಿದ್ದರಾಮಯ್ಯನವರ ಅಭಿಮಾನಿಗಳು, ಕಾಂಗ್ರೆಸ್ ನಾಯಕರು ಆಗಮಿಸಿದ್ದು, ರಾಕೇಶ್ ಸಿದ್ದರಾಮಯ್ಯನವರ ಅಂತಿಮ ದರ್ಶನ ಪಡೆದಿದ್ದಾರೆ.

ರಾಕೇಶ್ ಸಿದ್ದರಾಮಯ್ಯನವರ ಪಾರ್ಥಿವ ಶರೀರ ಇಂದು ಬೆಳಿಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಅಲ್ಲಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಕೊಂಡೊಯ್ಯಲಾಯಿತು. ಮೈಸೂರು ವಿಮಾನ ನಿಲ್ದಾಣದಿಂದ ನೇರವಾಗಿ ವಸ್ತು ಪ್ರದರ್ಶನ ಮೈದಾನಕ್ಕೆ ಪಾರ್ಥಿವ ಶರೀರವನ್ನು ತೆಗದುಕೊಂಡು ಹೋಗಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...