alex Certify
ಕನ್ನಡ ದುನಿಯಾ       Mobile App
       

Kannada Duniya

ತಮ್ಮ ವಿರುದ್ದದ ದೂರಿಗೆ ನಟ ರಕ್ಷಿತ್ ಶೆಟ್ಟಿ ಹೇಳಿದ್ದೇನು?

ಸಿಂಪಲ್ ಹುಡುಗ ರಕ್ಷಿತ್ ಶೆಟ್ಟಿ ವಿರುದ್ಧ ಧನಂಜಯ್ ಪದ್ಮನಾಭಾಚಾರ್ ಎಂಬುವವರು ಸಂಚಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ಜೆಪಿ ನಗರದ 6ನೇ ಹಂತದ 28ನೇ ಎ ಮುಖ್ಯರಸ್ತೆಯಲ್ಲಿ ಅಪಾರ್ಟ್ ಮೆಂಟ್ ಮುಂಭಾಗದ ನೋ ಪಾರ್ಕಿಂಗ್ ಝೋನ್ ನಲ್ಲಿ ಪದೇ ಪದೇ ಆಡಿ ಕಾರನ್ನು ಪಾರ್ಕ್ ಮಾಡಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಕಾರಿನ ಚಾಲಕನಿಗೆ ಅನೇಕ ಬಾರಿ ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಆದರೂ ಕ್ಯಾರೆ ಎನ್ನುತ್ತಿಲ್ಲ ಎಂದು ದೂರಿದ್ದಾರೆ.

ಇದರಿಂದ ಆಕ್ರೋಶಗೊಂಡ ನಿವಾಸಿಗಳು ಕಾರ್ ನಂಬರ್ ಬರೆದುಕೊಂಡು ಆರ್.ಟಿ.ಓ. ಕಛೇರಿಗೆ ಹೋಗಿ ಚೆಕ್ ಮಾಡಿದಾಗ ಅದು ನಟ ರಕ್ಷಿತ್ ಶೆಟ್ಟಿ ಅವರದ್ದು ಎಂದು ತಿಳಿದು ಬಂದಿದೆ. ತಕ್ಷಣ ಟ್ವೀಟರ್ ನಲ್ಲಿ ಟ್ರಾಫಿಕ್ ಪೊಲೀಸರಿಗೆ ದೂರಿರುವ ಧನಂಜಯ್, ಸಂಚಾರದ ನೀತಿ, ನಿಯಮಗಳು ಕೇವಲ ಸಾಮಾನ್ಯ ಜನರಿಗೆ ಮಾತ್ರವೇ…? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ದನಿಗೂಡಿಸಿರುವ ಹಲವರು, ಸಾಮಾಜಿಕ ಜಾಲತಾಣದಲ್ಲಿಯೇ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ.  ಆದರೆ ಈ ಕಾರನ್ನು ರಕ್ಷಿತ್ ಶೆಟ್ಟಿ ತಮ್ಮ ಗೆಳೆಯರೊಬ್ಬರಿಗೆ ಮಾರಾಟ ಮಾಡಿದ್ದು, ಆದರೆ ಆರ್.ಟಿ.ಓ. ರೆಕಾರ್ಡ್ ನಲ್ಲಿ ಮಾತ್ರ ಇನ್ನು ರಕ್ಷಿತ್ ಶೆಟ್ಟಿಯವರ ಹೆಸರೇ ಇದೆ ಎನ್ನಲಾಗಿದೆ.

ಈ ವಿವಾದದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ನಟ ರಕ್ಷಿತ್ ಶೆಟ್ಟಿ, ಈ ಹಿಂದೆ ಆ ಕಾರು ನನ್ನ ಬಳಿ ಇದ್ದಿದ್ದು ಹೌದು. ಆದರೆ ಇದನ್ನು ಈಗಾಗಲೇ ಸ್ನೇಹಿತರೊಬ್ಬರಿಗೆ ಮಾರಾಟ ಮಾಡಿದ್ದು, ಈಗ ಅವರು ಇದನ್ನು ಬಳಸುತ್ತಿದ್ದಾರೆ. ಚಾಲಕ ಅರಿವಿಲ್ಲದೇ ನೋ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿರಬಹುದು. ಈ ವಿಚಾರ ಮಾಧ್ಯಮಗಳಲ್ಲಿ ಬರುತ್ತಿದ್ದಂತೆಯೇ ಸ್ನೇಹಿತರು ತಮ್ಮ ಚಾಲಕನಿಗೆ ಈ ರೀತಿ ಮಾಡದಂತೆ ತಿಳಿಸಿದ್ದಾರೆಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...