alex Certify
ಕನ್ನಡ ದುನಿಯಾ       Mobile App
       

Kannada Duniya

ಗೋಕರ್ಣ ದೇವಾಲಯ ಮತ್ತೆ ಸರ್ಕಾರದ ಸುಪರ್ದಿಗೆ

ಉತ್ತರ ಕನ್ನಡ ಜಿಲ್ಲೆ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು 2008 ರಲ್ಲಿ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿದ್ದ ಅಂದಿನ ಸರ್ಕಾರದ ತೀರ್ಮಾನವನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ.

ಅಂದು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.

ಮಹಾಬಲೇಶ್ವರ ದೇವಾಲಯವನ್ನು ರಾಮಚಂದ್ರಪುರ ಮಠಕ್ಕೆ ಹಸ್ತಾಂತರಿಸಲು ಅಂದಿನ ಸರ್ಕಾರ ಕೈಗೊಂಡಿದ್ದ ಆದೇಶದಲ್ಲಿ ಲೋಪ ದೋಷಗಳಿವೆ. ಈ ದೇವಾಲಯವನ್ನು ಧಾರ್ಮಿಕ ದತ್ತಿ ಇಲಾಖೆ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲವೆಂದು ತಿಳಿಸಿರುವ ನ್ಯಾಯಾಲಯ, ಸರ್ಕಾರದ ಈ ಆದೇಶವನ್ನು ರದ್ದುಗೊಳಿಸಿರುವುದಾಗಿ ತನ್ನ ತೀರ್ಪಿನಲ್ಲಿ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...