alex Certify
ಕನ್ನಡ ದುನಿಯಾ       Mobile App
       

Kannada Duniya

ಅಲ್ಪಸಂಖ್ಯಾತರ ಕೇಸ್ ವಾಪಸ್, ನಿರ್ಧಾರ ಬದಲಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದಾಖಲಾದ ಪ್ರಕರಣಗಳನ್ನು ಕೈ ಬಿಡುವ ನಿರ್ಧಾರವನ್ನು ಸರ್ಕಾರ ಬದಲಿಸಿದ್ದು, ಎಲ್ಲಾ ಸಮುದಾಯದ ಮುಗ್ಧರ ಕೇಸ್ ಗಳನ್ನು ವಾಪಸ್ ಪಡೆಯಲು ಮುಂದಾಗಿದೆ.

2013 ರಿಂದ 2017 ರ ಅವಧಿಯಲ್ಲಿ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತ ಸಮುದಾಯದ ಮುಗ್ಧರ ವಿರುದ್ಧ ದಾಖಲಾದ ಕೇಸ್ ಗಳನ್ನು ವಾಪಸ್ ಪಡೆಯಲು ಸರ್ಕಾರ ಮುಂದಾಗಿದ್ದು, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಚುನಾವಣೆಯ ಹೊಸ್ತಿಲಲ್ಲಿ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂದು ಬಿ.ಜೆ.ಪಿ. ಟೀಕಿಸಿತ್ತು. ಈಗ ತನ್ನ ನಿರ್ಧಾರವನ್ನು ಬದಲಿಸಿದ ರಾಜ್ಯ ಸರ್ಕಾರ, ಎಲ್ಲಾ ಸಮುದಾಯದ ಮುಗ್ಧರ ಮೇಲಿನ ಕೇಸ್ ಗಳನ್ನು ವಾಪಸ್ ಪಡೆಯಲಾಗುವುದು ಎಂದು ಹೇಳಿದೆ.

ಕೋಮು ಗಲಭೆ ಮಾತ್ರವಲ್ಲ, ಎಲ್ಲಾ ಹೋರಾಟ, ವಿದ್ಯಾರ್ಥಿ ಚಳವಳಿ, ರೈತ ಹೋರಾಟ, ಕನ್ನಡ ಸಂಘಟನೆಗಳ ಹೋರಾಟಗಾರರ ಮೇಲಿನ ಕೇಸ್ ಗಳನ್ನು ಪರಿಶೀಲಿಸಿ ವಾಪಸ್ ಪಡೆಯಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕಣ್ತಪ್ಪಿನಿಂದಾಗಿ ಪದ ಸೇರ್ಪಡೆಯಾಗಿದೆ. ಎಲ್ಲಾ ಮುಗ್ದರ ಮೇಲಿನ ಕೇಸ್ ಗಳನ್ನು ವಾಪಸ್ ಪಡೆಯಲಾಗುತ್ತದೆ ಎಂದು ಹೇಳಿದ್ದಾರೆ.

ಈ ಕುರಿತಂತೆ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್. ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯುವುದಿಲ್ಲ. ಕಾನೂನು ರೀತಿ ಪರಿಶೀಲಿಸಿ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...