alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಕ್ಕೆ ದುಂಬಾಲು ಬೇಡ: ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯದಲ್ಲಿ ರಾಜಕೀಯ ಚಿತ್ರಣ ಹಿಂದಿನಂತಿಲ್ಲ. ಅಸ್ತಿತ್ವಕ್ಕೆ ಬರುತ್ತಿರುವುದು ಸಮ್ಮಿಶ್ರ ಸರ್ಕಾರ, ಹೀಗಾಗಿ ಪ್ರತಿಯೊಬ್ಬರೂ ಸಚಿವ ಸ್ಥಾನಕ್ಕಾಗಿ ದುಂಬಾಲು ಬೀಳಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಹಾಗೂ ಹಿರಿಯ ನಾಯಕರಿಗೆ ಶಾಸಕ ರಾಮಲಿಂಗಾರೆಡ್ಡಿ ಮನವಿ ಮಾಡಿಕೊಂಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನನಗೆ ಸಚಿವ ಸ್ಥಾನ ಕೊಡಿ ಎಂದು ಕೇಳುವುದಿಲ್ಲ. ಕೊಟ್ಟರೆ ಬೇಡ ಎನ್ನುವುದೂ ಇಲ್ಲ’ ಎಂದ ಅವರು, ಈ ಹಿಂದೆ ಸಚಿವರಾಗಿದ್ದ ಕೆಲ ಹಿರಿಯರು ಈ ಬಾರಿ ಸಚಿವ ಸ್ಥಾನ ತ್ಯಾಗ ಮಾಡಬೇಕಾದ ಪರಿಸ್ಥಿತಿ ಇದೆ ಎಂದರು.

‘ಜಯನಗರ ಮತ್ತು ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್–ಜೆಡಿಎಸ್ ಒಮ್ಮತದ ಅಭ್ಯರ್ಥಿಗಾಗಿ ಚರ್ಚೆ ನಡೆದಿದೆ. ಇದು ಫಲಪ್ರದವಾದರೆ ಜಯನಗರದಲ್ಲಿ ಸೌಮ್ಯಾರೆಡ್ಡಿ ಒಮ್ಮತದ ಅಭ್ಯರ್ಥಿಯಾಗಲಿದ್ದಾರೆ’ ಎಂದು ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...