alex Certify ಬೈಕ್ ಗಳ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗಳ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ರಾಮನಗರ: ರಾಮನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಮಹಿಳಾ ಕಾಲೇಜ್ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ರಾಮನಗರದ ಬಾಲಗೇರಿ ಮೂರ್ತಿ, ವೆಂಕಟೇಶ್ ಹಾಗೂ ಅಚ್ಚಲುದೊಡ್ಡಿಯ ರಘು ಮೃತಪಟ್ಟವರು ಎಂದು ಹೇಳಲಾಗಿದೆ. ವೇಗವಾಗಿದ್ದ ಎರಡು ಪಲ್ಸರ್ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...