alex Certify
ಕನ್ನಡ ದುನಿಯಾ       Mobile App
       

Kannada Duniya

2 ಕ್ಷೇತ್ರದಲ್ಲಿ ಹೆಚ್.ಡಿ.ಕೆ. ಸ್ಪರ್ಧೆ, ಎಲ್ಲೆಲ್ಲಿ ಗೊತ್ತಾ…?

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ಜೆ.ಡಿ.ಎಸ್. ರಾಜ್ಯಾಧ್ಯಕ್ಷ, ಮಾಜಿ ಸಿ.ಎಂ. ಹೆಚ್.ಡಿ. ಕುಮಾರಸ್ವಾಮಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ. ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.

ಚನ್ನಪಟ್ಟಣದಲ್ಲಿ ನಡೆದ ವಿಕಾಸಪರ್ವ ಸಮಾವೇಶದಲ್ಲಿ ಮಾತನಾಡಿದ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರು, ರಾಮನಗರ ಮತ್ತು ಚನ್ನಪಟ್ಟಣದಿಂದ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಅವರನ್ನು ಬೆಂಬಲಿಸಿ ಎಂದು ಹೇಳಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಕೂಡ 2 ಕ್ಷೇತ್ರಗಳಿಂದ ಕಣಕ್ಕಿಳಿಯುವುದಾಗಿ ತಿಳಿಸಿದ್ದು, ಚನ್ನಪಟ್ಟಣ ಮತ್ತು ರಾಮನಗರ ನನ್ನ 2 ಕಣ್ಣುಗಳಿದ್ದಂತೆ. ನಮಗೆ ಆಡಳಿತ ನಡೆಸಲು ಅವಕಾಶ ಮಾಡಿಕೊಡಿ, ಕಮಿಷನ್ ಸರ್ಕಾರಗಳನ್ನು ದೂರವಿಡಿ ಎಂದು ಹೇಳಿದ್ದಾರೆ.

ಈ ಮೂಲಕ ಚನ್ನಪಟ್ಟಣದಲ್ಲಿ ಜೆ.ಡಿ.ಎಸ್. ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಹೆಚ್.ಡಿ. ಕುಮಾರಸ್ವಾಮಿ, ಸಿ.ಪಿ. ಯೋಗೇಶ್ವರ್ ಮುಖಾಮುಖಿಯಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...