alex Certify
ಕನ್ನಡ ದುನಿಯಾ       Mobile App
       

Kannada Duniya

ದೇವಿಯ ಜಾತ್ರೆಯಲ್ಲಿ ಕೊಂಡ ಹಾಯುವಾಗಲೇ ಅವಘಡ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಉಯ್ಯಂಬಳ್ಳಿಯಲ್ಲಿ ದೇವರ ಕಳಸ ಹೊತ್ತು ಕೊಂಡ ಹಾಯುತ್ತಿದ್ದ ಅರ್ಚಕ ಆಯತಪ್ಪಿ ಬಿದ್ದಿದ್ದಾರೆ.

ಅರ್ಚಕ ರವಿ(35) ಅವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಗ್ರಾಮದೇವತೆ ಮಾರಮ್ಮ ದೇವಿ ಜಾತ್ರೆಯ ಪ್ರಯುಕ್ತ ಕೊಂಡ ಹಾಯುವ ಸಂದರ್ಭದಲ್ಲಿ ಈ ಅವಘಡ ನಡೆದಿದೆ.

ಸುಮಾರು 15 ಮೀಟರ್ ಉದ್ದದ ಗುಂಡಿಯಲ್ಲಿ ಕೆಂಡದ ಹಾದಿಯನ್ನು ಸಿದ್ಧಪಡಿಸಿದ್ದು, ಅರ್ಚಕ ರವಿ ಕೊಂಡ ಹಾಯಲು ಮುಂದಾಗಿದ್ದಾರೆ. ಸ್ವಲ್ಪ ದೂರದವರೆಗೆ ಸಾಗಿದ ಅವರು ಆಯತಪ್ಪಿ ಬಿದ್ದಿದ್ದು, ಕೂಡಲೇ ಸ್ಥಳದಲ್ಲಿದ್ದ ಗ್ರಾಮಸ್ಥರು ಅವರನ್ನು ರಕ್ಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ರವಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...