alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಂಡ ಹಾಯುವಾಗಲೇ ಅವಘಡ

ರಾಮನಗರ: ದೇವರ ಉತ್ಸವದಲ್ಲಿ ಕೊಂಡ ಹಾಯುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಮೂವರು ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ರೇವಣಸಿದ್ಧೇಶ್ವರ ಬೆಟ್ಟದಲ್ಲಿ ನಡೆದಿದೆ.

ರೇವಣಸಿದ್ದೇಶ್ವರ ರಥೋತ್ಸವದ ಅಂಗವಾಗಿ ಸುಮಾರು 15 ಅಡಿ ಉದ್ದದ ಕೊಂಡದ ಮಾರ್ಗವನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಹಾಯುವ ಸಂದರ್ಭದಲ್ಲಿ ಪ್ರಧಾನ ಅರ್ಚಕ ವಿಜಯಕುಮಾರ್ ಅವರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ.

ಅವರನ್ನು ರಕ್ಷಿಸಲು ಹೋದ ಮಂಜುನಾಥ್ ಮತ್ತು ರುದ್ರೇಶ್ ಅವರಿಗೂ ಸುಟ್ಟ ಗಾಯಗಳಾಗಿದ್ದು, ಮೂವರನ್ನು ರಕ್ಷಿಸಿ ರಾಮನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಕೆಂಡದ ಮೇಲೆ ನಡೆಯುವ ಧಾವಂತದಲ್ಲಿ ವಿಜಯಕುಮಾರ್ ಆಯತಪ್ಪಿ ಬಿದ್ದಿದ್ದಾರೆ. ಕೊಂಡ ಹಾಯುವ ವೇಳೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...