alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ರಮೇಶ್ ಜಾರಕಿಹೊಳಿ ಕೆನ್ನೆ ಸವರಿದ ಸಿಎಂ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಬೆಳಗಾವಿಗೆ ಭೇಟಿ ನೀಡಿದ್ದು, ಈ ವೇಳೆ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಸ್ವಾಗತಿಸಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಯವರ ಕೆನ್ನೆ ಸವರಿ ಆತ್ಮೀಯತೆ ತೋರಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅವರ ಸಹೋದರ ಸತೀಶ್ ಜಾರಕಿಹೊಳಿ ಎಲ್ಲರ ಕೇಂದ್ರ ಬಿಂದುವಾಗಿದ್ದು, ಸಹೋದರರ ನಡೆಯಿಂದ ಸರ್ಕಾರ ಉರುಳುತ್ತಾ ಎಂಬ ಪ್ರಶ್ನೆ ಮೂಡುವಂತೆ ಮಾಡಿದ್ದರು.

ಈ ಮಧ್ಯೆ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬೆಳಗಾವಿಗೆ ಆಗಮಿಸಿದ ವೇಳೆ ರಮೇಶ್ ಜಾರಕಿಹೊಳಿಯವರ ಕೆನ್ನೆ ಸವರಿ, ನಿಮ್ಮ ಪಕ್ಷದಲ್ಲಿನ ಸಮಸ್ಯೆ ಬಗೆಹರಿಯಿತಾ ಎಂದು ಆತ್ಮೀಯತೆಯಿಂದ ವಿಚಾರಿಸಿಕೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...