alex Certify
ಕನ್ನಡ ದುನಿಯಾ       Mobile App
       

Kannada Duniya

ಪಿ.ಎಲ್.ಡಿ. ಬ್ಯಾಂಕ್ ಚುನಾವಣೆ ಸುಖಾಂತ್ಯ: ನಿಟ್ಟುಸಿರುಬಿಟ್ಟ ಕಾಂಗ್ರೆಸ್ ನಾಯಕರು

ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಅವರ ನಡುವೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಬೆಳಗಾವಿ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಚುನಾವಣೆ ಸುಖಾಂತ್ಯಗೊಂಡಿದೆ. ಈ ಬಾರಿಯೂ ಅವಿರೋಧ ಆಯ್ಕೆಯಾಗಿದ್ದು, ಸಮಸ್ಯೆ ಸುಸೂತ್ರವಾಗಿ ಬಗೆಹರಿದಿದ್ದಕ್ಕೆ ಕಾಂಗ್ರೆಸ್ ನಾಯಕರು ನೆಮ್ಮದಿಯ ನಿಟ್ಟುಸಿರುಬಿಟ್ಟಿದ್ದಾರೆ.

ಪಿ.ಎಲ್.ಡಿ. ಬ್ಯಾಂಕ್ ಚುನಾವಣೆ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿದ್ದರಿಂದ ಇದು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರಕಾರದ ಮೇಲೂ ಪರಿಣಾಮ ಬೀರಬಹುದೆಂದು ಹೇಳಲಾಗಿತ್ತು.

ಈ ವಿಚಾರ ಕಾಂಗ್ರೆಸ್ ಹೈಕಮಾಂಡ್ ಮಟ್ಟಕ್ಕೂ ತಲುಪಿದ್ದು, ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೆಹಲಿಯಿಂದಲೇ ದೂರವಾಣಿಯಲ್ಲಿ ಮಾತನಾಡಿದ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಳೆದ ರಾತ್ರಿಯೇ ಬೆಳಗಾವಿಗೆ ದೌಡಾಯಿಸಿದ್ದು, ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಮಾತುಕತೆ ನಡೆಸಿ ಉಭಯ ಬಣಕ್ಕೂ ಸಮ್ಮತವಾಗುವ ಸೂತ್ರವನ್ನು ಮಂಡಿಸಿದ್ದರು. ಇದಕ್ಕೆ ಎಲ್ಲರೂ ಒಪ್ಪಿಕೊಂಡ ಕಾರಣ ಉದ್ಭವಿಸಿದ್ದ ಸಮಸ್ಯೆ ಬಗೆಹರಿದಿದೆ. ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರು ಈಗ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...