alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಸಭಾಧ್ಯಕ್ಷರ ಸೂಚನೆಗೆ ಜನಪ್ರತಿನಿಧಿಗಳು ‘ಶಾಕ್’

ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ನೀಡಿರುವ ಸೂಚನೆಯೊಂದು ಶಾಸಕರು, ಮಾಜಿ ಶಾಸಕರುಗಳಿಗೆ ಶಾಕ್ ನೀಡಿದೆ. ರಮೇಶ್ ಕುಮಾರ್ ಅವರ ಸೂಚನೆಯಂತೆ ವಿಧಾನಸಭಾ ಕಾರ್ಯದರ್ಶಿ ಎಸ್. ಮೂರ್ತಿ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.

ಇನ್ನು ಮುಂದೆ ಶಾಸಕರು, ಮಾಜಿ ಶಾಸಕರು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಅದರ ವೆಚ್ಚ ಮರು ಪಾವತಿಸಗುವುದಿಲ್ಲವೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಶಾಸಕರು ಹಾಗೂ ಮಾಜಿ ಶಾಸಕರು ಮಾತ್ರವಲ್ಲದೆ ಅವರ ಕುಟುಂಬ ಸದಸ್ಯರಿಗೂ ವೈದ್ಯಕೀಯ ಚಿಕಿತ್ಸಾ ವೆಚ್ಚ ಮರುಪಾವತಿ ಮಾಡಲಾಗುತ್ತಿದ್ದು, ಬಹುತೇಕರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಪ್ರತಿ ವರ್ಷ ಕೋಟ್ಯಾಂತರ ರೂಪಾಯಿ ಪಾವತಿಸಲಾಗುತ್ತಿತ್ತು. ಈಗ ಇದಕ್ಕೆ ಕಡಿವಾಣ ಹಾಕಲು ರಮೇಶ್ ಕುಮಾರ್ ಮುಂದಾಗಿದ್ದು, ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...