alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ಸಮೀಪದ ಮೆಣಸಿಗನಹಳ್ಳಿಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕು ಹನೂರಿನ ಪುಟ್ಟೇಗೌಡ(52) ಮೃತಪಟ್ಟವರೆಂದು ಗುರುತಿಸಲಾಗಿದೆ. ಹನುಮಂತಪ್ಪ ಎಂಬುವವರ ಜಮೀನಿನಲ್ಲಿ ಪುಟ್ಟೇಗೌಡ ಕಳೆದ 6 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು.

ಮೆಣಸಿಗನಹಳ್ಳಿಯ ಬಳಿ ಪುಟ್ಟೇಗೌಡರ ಮೇಲೆ ದಾಳಿ ಮಾಡಿದ ಕಾಡಾನೆ ಅವರನ್ನು ಕೊಂದು ಹಾಕಿದೆ. ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿ, ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...